ಐಎಎಸ್‌ ಅಧಿಕಾರಿಗಳ ನಿರ್ಲಕ್ಷ್ಯ; ತೆರಿಗೆ ಇಲಾಖೆಯಿಂದ ೪೫೦ ಕೋಟಿ ರು. ಮುಟ್ಟುಗೋಲು
ಭಾರತದ ಜಾತಿ ಸಂಘರ್ಷಕ್ಕೆ ಮತ್ತೆ ಸಾಕ್ಷಿ ಹೇಳಿದ ತೆಲಂಗಾಣ ಮರ್ಯಾದೆಗೇಡು ಹತ್ಯೆ
ಗೌರಿ ಹತ್ಯೆ ಪ್ರಕರಣ: ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ನಾಲ್ವರ ಅರ್ಜಿ

ಸಿಎಂ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ: ಕಡೆಗೂ ಎಚ್ಚೆತ್ತುಕೊಂಡ ಸರ್ಕಾರ

ಮುಖ್ಯಮಂತ್ರಿಗಳ ಹೆಲಿಕಾಪ್ಟರ್‌ ಪ್ರಯಾಣದ ವೇಳೆ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ದೋಷಗಳ ಬಗ್ಗೆ ರಾಜ್ಯ ಸರ್ಕಾರ ಮೌನ ಮುರಿದಿದೆ. ಹೆಲಿಕಾಪ್ಟರ್‌ ಪ್ರಯಾಣ ಸುರಕ್ಷತೆಗೆ ಆದ್ಯತೆ ನೀಡುವತ್ತ ಹೆಜ್ಜೆ ಇಟ್ಟಿದೆ. ಇದಕ್ಕಾಗಿ ಶಿಷ್ಟಾಚಾರದ ನಿಯಮಗಳಿಗೂ ತಿದ್ದುಪಡಿ ತರಲು ಚಿಂತಿಸಿದೆ

ಮಹಾಂತೇಶ್ ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಬುರ್ಗಿಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ಕಾಣಿಸಿಕೊಂಡಿದ್ದ ತಾಂತ್ರಿಕ ದೋಷ ಘಟನೆ ಹಿನ್ನೆಲೆಯಲ್ಲಿ ‘ದಿ ಸ್ಟೇಟ್‌’ ಮುಂಜಾಗರೂಕತಾ ಕ್ರಮಗಳಲ್ಲಿನ ಲೋಪದ ಬಗ್ಗೆ ವಿಸ್ತೃತ ವರದಿ ಪ್ರಕಟಿಸಿ ಬೆಳಕು ಚೆಲ್ಲಿತ್ತು. ವರದಿ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ರಾಜ್ಯ ಸರ್ಕಾರ ಈ ಸಂಬಂಧ ಶಿಷ್ಟಾಚಾರ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ರೂಪಿಸಲು ಮುಂದಾಗಿದೆ. ಮುಖ್ಯಮಂತ್ರಿಯವರು ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ಕೈಗೊಳ್ಳುವ‌ ಸಂದರ್ಭದಲ್ಲಿ ತಾಂತ್ರಿಕ ದೋಷಗಳು ಮರುಕಳಿಸದೆ ಇರಲು ಹೊಣೆಗಾರಿಕೆಯನ್ನು ನಿಗದಿಪಡಿಸಲು ಉದ್ದೇಶಿಸಿದೆ.

ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ನಲ್ಲಿ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಆಯಾ ಜಿಲ್ಲಾ ಮಟ್ಟದಲ್ಲೇ ಸಮನ್ವಯ ಅಧಿಕಾರಿಯೊಬ್ಬರನ್ನು ನೇಮಿಸಲು ಸರ್ಕಾರ ಚಿಂತಿಸಿದೆ. ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಮುಖ್ಯ ಕಾರ್ಯದರ್ಶಿ ಅವರು ಅಧಿಕೃತವಾಗಿ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಕಚೇರಿಯ ಅಧಿಕಾರಿಯೊಬ್ಬರು ‘ದಿ ಸ್ಟೇಟ್‌’ಗೆ ಖಚಿತಪಡಿಸಿದ್ದಾರೆ.

‘ಪೈಲಟ್, ಕೋ- ಪೈಲಟ್‌ಗಳೊಂದಿಗೆ ವ್ಯವಹರಿಸಲು ಹಾಗೂ ಹೆಲಿಕಾಪ್ಟರ್‌ನ ತಾಂತ್ರಿಕ ತೊಂದರೆಗಳಿದ್ದರೆ, ಇಂಧನ ರೀಫಿಲ್‌ ಅವಶ್ಯಕತೆ ಇದ್ದರೆ ಅದರ ಬಗ್ಗೆ ಮೇಲುಸ್ತುವಾರಿ ಮಾಡಲು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಯೊಬ್ಬರನ್ನು ನೇಮಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲು ಪರಿಶೀಲಿಸಲಾಗುತ್ತಿದೆ’ ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್‌ ಝಾ ಅವರು ‘ದಿ ಸ್ಟೇಟ್‌’ಗೆ ತಿಳಿಸಿದರು.

ಇದನ್ನೂ ಓದಿ : ಮುಖ್ಯಮಂತ್ರಿಗಳ ಜೀವವೆಂದರೆ ಅವರದೇ ಸರ್ಕಾರಕ್ಕೆ ಇಷ್ಟೊಂದು ತಾತ್ಸಾರವೇ?

ಅದೇ ರೀತಿ ‘ ಹೆಲಿಕಾಪ್ಟರ್‌ ತಾಂತ್ರಿಕ ವಿಷಯ, ಇಂಧನ ರೀಫಿಲ್‌ ಕುರಿತು ಸಮನ್ವಯ ಮಾಡುವ ಸಲುವಾಗಿ ಒಬ್ಬ ಜವಾಬ್ದಾರಿ ಅಧಿಕಾರಿ ನೇಮಕವಾಗಬೇಕು. ಹೆಲಿಕಾಪ್ಟರ್‌ನ್ನು ಒದಗಿಸುವ ಖಾಸಗಿ ಸಂಸ್ಥೆಯೇ ಆ ಅಧಿಕಾರಿಯನ್ನು ನೇಮಿಸಬೇಕು. ಅವರ ಹೆಸರು ಮತ್ತು ದೂರವಾಣಿ ಸಂಖ್ಯೆಯನ್ನು ಜಿಲ್ಲಾಧಿಕಾರಿಗೆ ಮುಂಚಿತವಾಗಿ ನೀಡಬೇಕು’ ಎಂಬ ನಿರ್ದೇಶನವನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಹಾಗೆಯೇ ಜಿಲ್ಲಾ, ತಾಲೂಕು ಮಟ್ಟದಲ್ಲಿ ಮುಖ್ಯಮಂತ್ರಿಯವರು ಪ್ರವಾಸ ಕೈಗೊಳ್ಳುವಾಗ ಚಾಲ್ತಿಯಲ್ಲಿರುವ ಶಿಷ್ಟಾಚಾರ ನಿಯಮಗಳಿಗೆ ಕೆಲ ತಿದ್ದುಪಡಿ ತಂದು ಪರಿಷ್ಕೃತ ಸುತ್ತೋಲೆ ಹೊರಡಿಸಲು ಸರ್ಕಾರ ಪರಿಶೀಲಿಸುತ್ತಿದೆ. ಮುಖ್ಯಮಂತ್ರಿ ಹಾಗೂ ಇತರೆ ಸಚಿವರುಗಳ ಹೆಲಿಕಾಪ್ಟರ್‌ ಪ್ರವಾಸದ ಸಂದರ್ಭವನ್ನು ಸುತ್ತೋಲೆಯಲ್ಲಿ ಸೇರ್ಪಡೆ ಮಾಡಲಿದೆ. ಶಿಷ್ಟಾಚಾರ ಪಾಲಿಸುವ ಅಧಿಕಾರಿಗಳು ಪಾಲಿಸಬೇಕಾದ ಮಾರ್ಗಸೂಚಿಗಳನ್ನು ರೂಪಿಸುವ ಪ್ರಸ್ತಾವನೆಯೂ ಸರ್ಕಾರದ ಮುಂದಿದೆ ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದಾಗಿನಿಂದ ಈವರೆಗೆ ಅವರು ಪ್ರಯಾಣಿಸಿರುವ ಹೆಲಿಕಾಪ್ಟರ್‌ಗಳಲ್ಲಿ ಐದು ಬಾರಿ ತಾಂತ್ರಿಕ ದೋಷ ಕಾಣಿಸಿಕೊಂಡದ್ದನ್ನು ಸ್ಮರಿಸಿಕೊಳ್ಳಬಹುದು

ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ Chief Minister Siddaramaiah Helicopter ಹೆಲಿಕಾಪ್ಟರ್‌ ಸಮನ್ವಯ ಅಧಿಕಾರಿ Coordination officer
ಐಎಎಸ್‌ ಅಧಿಕಾರಿಗಳ ನಿರ್ಲಕ್ಷ್ಯ; ತೆರಿಗೆ ಇಲಾಖೆಯಿಂದ ೪೫೦ ಕೋಟಿ ರು. ಮುಟ್ಟುಗೋಲು
ಭಾರತದ ಜಾತಿ ಸಂಘರ್ಷಕ್ಕೆ ಮತ್ತೆ ಸಾಕ್ಷಿ ಹೇಳಿದ ತೆಲಂಗಾಣ ಮರ್ಯಾದೆಗೇಡು ಹತ್ಯೆ
ಗೌರಿ ಹತ್ಯೆ ಪ್ರಕರಣ: ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ನಾಲ್ವರ ಅರ್ಜಿ
Editor’s Pick More

ವಿಡಿಯೋ | ನಮ್ಮ ಮನೆಯ ಮಂದಿಯೇ ನಮ್ಮ ಮೊದಲ ವಿರೋಧಿಗಳು!

ರಂಗ ದಿಶಾ | ‘ಹೇ ಪಾರ್ವತಿ ನಂದನ’, ‘ನೂರಾರು ಕನಸುಗಳ’ ಗೀತೆಗಳ ಪ್ರಸ್ತುತಿ

ಸ್ಟೇಟ್‌ಮೆಂಟ್‌ | ಹೋರಾಟ ನಡೆದದ್ದು ಸಲಿಂಗ ಕಾಮಕ್ಕಲ್ಲ, ಸಲಿಂಗ ಪ್ರೇಮಕ್ಕಾಗಿ

ಸಂಕಲನ | ಇನ್ಫೋಸಿಸ್‌ಗೆ ಸರ್ಕಾರಿ ಜಮೀನು ಮಂಜೂರಾತಿ ಕುರಿತ ತನಿಖಾ ವರದಿಗಳು