ಐಎಎಸ್‌ ಅಧಿಕಾರಿಗಳ ನಿರ್ಲಕ್ಷ್ಯ; ತೆರಿಗೆ ಇಲಾಖೆಯಿಂದ ೪೫೦ ಕೋಟಿ ರು. ಮುಟ್ಟುಗೋಲು
ಭಾರತದ ಜಾತಿ ಸಂಘರ್ಷಕ್ಕೆ ಮತ್ತೆ ಸಾಕ್ಷಿ ಹೇಳಿದ ತೆಲಂಗಾಣ ಮರ್ಯಾದೆಗೇಡು ಹತ್ಯೆ
ಗೌರಿ ಹತ್ಯೆ ಪ್ರಕರಣ: ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ನಾಲ್ವರ ಅರ್ಜಿ

ರಸ್ತೆ ಕಾಮಗಾರಿಗೆ ಎಚ್‌.ಕೆ.ಪಾಟೀಲ್‌ ಪಟ್ಟು ಹಿಡಿದಿರುವ 200 ಕೋಟಿ ಜರೂರು ಏನು?

ಸಚಿವರು, ಸಂಸದರು, ಶಾಸಕರು ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬೇಡಿಕೆಗಳನ್ನು ಸಲ್ಲಿಸುತ್ತಿದ್ದಾರೆ. ಇವರೆಲ್ಲರ ಬೇಡಿಕೆಗಳನ್ನು ಈಡೇರಿಸಲು ಅನುದಾನ ಲಭ್ಯವಿಲ್ಲವೆಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಸಚಿವ ಎಚ್‌.ಕೆ.ಪಾಟೀಲ್‌ ಮಾತ್ರ ಅನುದಾನಕ್ಕೆ ಪಟ್ಟು ಹಿಡಿದಿದ್ದಾರೆ.

ಮಹಾಂತೇಶ್ ಜಿ

ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿಗದಿಪಡಿಸಿರುವ ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಶಾಸಕರು, ಜನಪ್ರತಿನಿಧಿಗಳ ಬೇಡಿಕೆಯನ್ನು ಈಡೇರಿಸಲು ಯಾವುದೇ ಅನುದಾನ ಲಭ್ಯ ಇಲ್ಲವೆಂದು ಇಲಾಖೆಯ ಉಪ ಕಾರ್ಯದರ್ಶಿ ಮನವರಿಕೆ ಮಾಡಿಕೊಟ್ಟಿದ್ದರೂ 200 ಕೋಟಿ ರೂಪಾಯಿ ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ.ಪಾಟೀಲ್‌ ಅವರು ಪಟ್ಟು ಹಿಡಿದಿರುವ ಸಂಗತಿ ತಿಳಿದು ಬಂದಿದೆ.

ಈ ಅನುದಾನ ಒದಗಿಸುವ ಸಂಬಂಧದ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಷದ ಹಿಂದೆ ಯಾವುದೇ ಆದೇಶ ನೀಡದೇ ಕಡತ ಹಿಂದಿರುಗಿಸಿದ್ದರು.“ಆಡಳಿತ ಇಲಾಖೆಯ ಪ್ರಸ್ತಾವನೆ ಪರಿಶೀಲಿಸಿದೆ. ಆಡಳಿತ ಇಲಾಖೆ ಕಡತಗಳ ಮೇಲೆ ಮುಖ್ಯಮಂತ್ರಿಯವರು ಯಾವುದೇ ಆದೇಶ ನೀಡದೇ ಇರುವುದರಿಂದ ಕಡತವನ್ನು ಹಿಂತಿರುಗಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ,” ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ಆರ್‌.ಹೇಮಲತಾ ಅವರು ಗ್ರಾಮೀಣಾಭಿವೃದ್ಧಿ ಪಂ.ರಾಜ್‌ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ೨೦೧೭ರ ಮಾರ್ಚ್ ೩ರಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ಆದರೀಗ ಸಚಿವರು, ಶಾಸಕರ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಿದ್ದಾರೆ. “ಪ್ರಸ್ತುತ ಮುಖ್ಯಮಂತ್ರಿಯವರು ಮನವಿಗಳ ಮೇಲೆ ಅಗತ್ಯ ಅನುದಾನವನ್ನು ರಸ್ತೆಗಳ ಅಭಿವೃದ್ಧಿಗಾಗಿ ಬಿಡುಗಡೆ ಮಾಡಲು ಸೂಚನಾದೇಶ ನೀಡಿರುತ್ತಾರೆ,” ಎಂದು ಇಲಾಖೆಯ ಉಪ ಕಾರ್ಯದರ್ಶಿ ಅವರು ೨೦೧೮ರ ಜನವರಿ ೨ರಂದು ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಗೋಮಾಳ ಮಂಜೂರು; ಅಧಿಕಾರಿ ವಿರುದ್ಧ ಎಸಿಬಿ ತನಿಖೆ ಅಗತ್ಯವಿಲ್ಲ ಎಂದ ಎ.ಜಿ!

ಅಲ್ಲದೇ ಅದೇ ಟಿಪ್ಪಣಿಯಲ್ಲಿ “2017-18ನೇ ಸಾಲಿಗೆ 105.10 ಕೋಟಿ ರೂ.ಗಳನ್ನು ನಿಗದಿಪಡಿಸಿದ ಅನುದಾನಕ್ಕೆ ಈಗಾಗಲೇ ಕ್ರಿಯಾ ಯೋಜನೆಯನ್ನು ರೂಪಿಸಿ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.ಆದರೆ, ವಿವಿಧ ಜನಪ್ರತಿನಿಧಿಗಳು ರಸ್ತೆ ಅಭಿವೃದ್ಧಿಗಾಗಿ ಮುಖ್ಯಮಂತ್ರಿ, ಸಚಿವರಿಗೆ ಸಲ್ಲಿಸಿದ್ದ ಪ್ರಸ್ತಾವನೆಗಳ ಮೇಲೆ ನೀಡಿರುವ ಸೂಚನಾದೇಶಗಳಂತೆ ಕ್ರಮ ಕೈಗೊಳ್ಳಲು ಅನುದಾನ ಲಭ್ಯ ಇಲ್ಲ,” ಎಂದು ಇಲಾಖೆಯ ನಿರ್ದೇಶಕ ಡಾ.ಬೂವನಹಳ್ಳಿ ನಾಗರಾಜ್‌ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದರು.

ಇಷ್ಟೆಲ್ಲಾ ಬೆಳವಣಿಗೆಗಳು ನಡೆದಿದ್ದರೂ ಸಚಿವ ಎಚ್‌.ಕೆ.ಪಾಟೀಲ್‌ ಅವರು ಹೆಚ್ಚುವರಿ ಅನುದಾನಕ್ಕಾಗಿ ಹಿಡಿದಿರುವ ಪಟ್ಟನ್ನು ಈಗಲೂ ಬಿಡುತ್ತಿಲ್ಲ. “ ಸಚಿವರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರುಗಳಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಬೇಡಿಕೆ ತುಂಬಾ ಬರುತ್ತಿವೆ. ಆದ್ದರಿಂದ ಜನಪ್ರತಿನಿಧಿಗಳ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಇರುವ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಲು 200.೦೦ ಕೋಟಿ ರೂ.ಹೆಚ್ಚುವರಿ ಅನುದಾನ ಅವಶ್ಯಕತೆ ಇರುತ್ತದೆ. ಆದ್ದರಿಂದ ಕೂಡಲೇ 200.೦೦ ಕೋಟಿ ರೂ.ಅನುದಾನವನ್ನು ಜರೂರಾಗಿ ಬಿಡುಗಡೆ ಮಾಡಲು ಕೋರಿದೆ,” ಎಂದು ಎಚ್‌.ಕೆ.ಪಾಟೀಲ್‌ ಅವರು 2018ರ ಜನವರಿ 4ರಂದು ಆರ್ಥಿಕ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದು ದಾಖಲೆಯಿಂದ ಗೊತ್ತಾಗಿದೆ.

2016-17ನೇ ಸಾಲಿನಲ್ಲಿ ಕನಿಷ್ಠ 200 ಕೋಟಿ ರೂ.ಮೊತ್ತದಲ್ಲಿ ರಸ್ತೆ ಕ್ರಿಯಾ ಯೋಜನೆಗಳನ್ನು ತಯಾರಿಸಿ ಅನುಷ್ಠಾನಕ್ಕೆ ತರಲು ಇಲಾಖೆ ಮುಂದಾಗಿತ್ತು. ಈ ಯೋಜನೆಯ ಪ್ರಸ್ತಾವನೆಯನ್ನು 2017-18 ರ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪಿಸಲು ಆರ್ಥಿಕ ಇಲಾಖೆ ಅಭಿಪ್ರಾಯ ವ್ಯಕ್ತಪಡಿಸಿತ್ತು. ಅದರಂತೆ “ಶಾಸಕರ ಹಾಗೂ ಜನಪ್ರತಿನಿಧಿಗಳ ವಿಶೇಷ ಬೇಡಿಕೆ ಹಾಗೂ ಅಗತ್ಯದ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಈ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಒತ್ತಾಯ ಇರುತ್ತದೆ. ಆರ್ಥಿಕ ಇಲಾಖೆಗೆ ಪುನರ್‌ ಮಂಡನೆ ಮಾಡಿ,” ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಆರ್ಥಿಕ ಇಲಾಖೆ ಪ್ರಸ್ತಾವನೆಯನ್ನು ಹಿಂದಿರುಗಿಸಿತ್ತು. ಇದಕ್ಕೆ ಸಮರ್ಥನೆಗಳನ್ನೂ ನೀಡಿತ್ತು.

ಹಾಗೆಯೇ “ವಿವಿಧ ಸ್ತರದ ರಸ್ತೆಗಳು ಮತ್ತು ಅವುಗಳ ನಿರ್ವಹಣೆಗಾಗಿ ಸಂಸದರು, ಸಚಿವರು, ಶಾಸಕರು, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಅನುದಾನಕ್ಕೆ ನಿರಂತರವಾಗಿ ಬೇಡಿಕೆಯನ್ನು ಸಲ್ಲಿಸುತ್ತಲೇ ಇದ್ದಾರೆ. ಇವರೆಲ್ಲರ ಬೇಡಿಕೆಯನ್ನು ಈಡೇರಿಸಬೇಕೆಂದರೆ 6,000 ಕೋಟಿ ರೂ.ಗೂ ಅಧಿಕ ಮೊತ್ತ ಬೇಕು. ಜನಪ್ರತಿನಿಧಿಗಳು ಸಲ್ಲಿಸಿರುವ ಪ್ರಸ್ತಾವನೆಗಳನ್ನು ವಿವಿಧ ಕಡತಗಳಲ್ಲಿ ಸಲ್ಲಿಸಿದ್ದರೂ ಇವೆಲ್ಲವನ್ನೂ ಪರಿಗಣಿಸುವುದು ಆರ್ಥಿಕ ಸಂಪನ್ಮೂಲದಲ್ಲಿ ಸಾಧ್ಯವಾಗುವುದಿಲ್ಲ,” ಎಂದೂ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದರು ಎಂಬುದು ಗೊತ್ತಾಗಿದೆ.

ಜಿಲ್ಲಾ ಪಂಚಾಯ್ತಿಗಳಿಗೆ 118.11 ಕೋಟಿ ರೂ., ಶಾಸಕರ ಅಧ್ಯಕ್ಷತೆಯಲ್ಲಿರುವ ಟಾಸ್ಕ್‌ಪೋರ್ಸ್‌ ಅಡಿಯಲ್ಲಿ 178.54 ಕೋಟಿ ರೂ.ಅನುದಾನವನ್ನು ಆರ್ಥಿಕ ಇಲಾಖೆ ನೇರವಾಗಿ ಆಯಾ ಜಿಲ್ಲಾ ಪಂಚಾಯ್ತಿ ಮತ್ತು ಟಾಸ್ಕ್‌ಪೋರ್ಸ್‌ಗಳಿಗೆ ಮೂರು ಕಂತಿನಲ್ಲಿ ಬಿಡುಗಡೆ ಮಾಡುತ್ತಿದೆ. ಅಲ್ಲದೆ, ರಾಜ್ಯಮಟ್ಟದಲ್ಲಿ ನಿಗದಿಪಡಿಸಿರುವ 28.05 ಕೋಟಿ ರೂ.ಅನುದಾಕ್ಕೆ ರಾಜ್ಯದ ವಿವಿಧ ಜನಪ್ರತಿನಿಧಿಗಳ ಕೋರಿಕೆಯಂತೆ ರಸ್ತೆ ಅಭಿವೃದ್ಧಿ, ದುರಸ್ತಿಯ ಕ್ರಿಯಾ ಯೋಜನೆ ಅನುಷ್ಟಾನದಲ್ಲಿದೆ. ಹಾಗೆಯೇ ಕೆಲ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಅವರ ಸೂಚನೆ ಮತ್ತು ಆರ್ಥಿಕ ಇಲಾಖೆ ಸಹಮತಿಯಂತೆ ಆಡಳಿತಾತ್ಮಕ ಅನುಮೋದನೆಯೂ ದೊರೆತಿದೆ ಎಂದು ಹೇಳಲಾಗಿದೆ.

panchayath raj and rural development minister ಅನುದಾನ H K Patil ರಸ್ತೆ ಕಾಮಗಾರಿ ಮುಖ್ಯಮಂತ್ರಿಗೆ ಪತ್ರ ಎಚ್‌ ಕೆ ಪಾಟೀಲ್‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ Grants Road Projects Letter to Chief Minister
ಐಎಎಸ್‌ ಅಧಿಕಾರಿಗಳ ನಿರ್ಲಕ್ಷ್ಯ; ತೆರಿಗೆ ಇಲಾಖೆಯಿಂದ ೪೫೦ ಕೋಟಿ ರು. ಮುಟ್ಟುಗೋಲು
ಭಾರತದ ಜಾತಿ ಸಂಘರ್ಷಕ್ಕೆ ಮತ್ತೆ ಸಾಕ್ಷಿ ಹೇಳಿದ ತೆಲಂಗಾಣ ಮರ್ಯಾದೆಗೇಡು ಹತ್ಯೆ
ಗೌರಿ ಹತ್ಯೆ ಪ್ರಕರಣ: ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ನಾಲ್ವರ ಅರ್ಜಿ
Editor’s Pick More

ವಿಡಿಯೋ | ನಮ್ಮ ಮನೆಯ ಮಂದಿಯೇ ನಮ್ಮ ಮೊದಲ ವಿರೋಧಿಗಳು!

ರಂಗ ದಿಶಾ | ‘ಹೇ ಪಾರ್ವತಿ ನಂದನ’, ‘ನೂರಾರು ಕನಸುಗಳ’ ಗೀತೆಗಳ ಪ್ರಸ್ತುತಿ

ಸ್ಟೇಟ್‌ಮೆಂಟ್‌ | ಹೋರಾಟ ನಡೆದದ್ದು ಸಲಿಂಗ ಕಾಮಕ್ಕಲ್ಲ, ಸಲಿಂಗ ಪ್ರೇಮಕ್ಕಾಗಿ

ಸಂಕಲನ | ಇನ್ಫೋಸಿಸ್‌ಗೆ ಸರ್ಕಾರಿ ಜಮೀನು ಮಂಜೂರಾತಿ ಕುರಿತ ತನಿಖಾ ವರದಿಗಳು